ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂದು ಲಖನೌದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೇಟ್ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಲಖನೌದಲ್ಲಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಯೋಗಿ ಆದಿತ್ಯನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದರು.
ವಿಧಾನಸಭೆ ಚುನಾವಣೆಯಲ್ಲಿ ಆದಿತ್ಯನಾಥ ದಾಖಲೆ ಬರೆದು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಬಿಜೆಪಿಯು 1985 ರಿಂದ ಯುಪಿಯಲ್ಲಿ ಅಧಿಕಾರವನ್ನು ಉಳಿಸಿಕೊಂಡ ಮೊದಲ ಪಕ್ಷವಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಜೊತೆ ಉಪಮುಖ್ಯಮಂತ್ರಿಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹರಿಯಾಣ ಸಿಎಂ ಎಂಎಲ್ ಖಟ್ಟರ್, ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಮತ್ತಿತರರು ಉಪಸ್ಥಿತರಿದ್ದರು. ಸಚಿವರು, ಕೈಗಾರಿಕೋದ್ಯಮಿಗಳು ಮತ್ತು ಇತರ ರಾಜ್ಯಗಳ ಸಚಿವರೊಂದಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಇನ್ನು, ಭೂಪೇಂದ್ರ ಸಿಂಗ್ ಚೌಧರಿ, ಅನಿಲ್ ರಾಜ್ಭರ್, ಜಿತಿನ್ ಪ್ರಸಾದ, ರಾಕೇಶ್ ಸಚನ್,ಲಕ್ಷ್ಮಿ ನಾರಾಯಣ ಚೌಧರಿ, ಜೈವಿರ್ ಸಿಂಗ್, ಧರ್ಮಪಾಲ್ ಸಿಂಗ್, ನಂದ ಗೋಪಾಲ್ ಗುಪ್ತ ನಂದಿ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.