ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 20 ವರ್ಷದ ಆನೆಯೊಂದು ಸಾವನ್ನಪ್ಪಿರುವ ಘಟನೆ ಕನಕಪುರ ರಸ್ಥೆಯಲ್ಲಿ ನಡೆದಿದೆ. ದೇವಿಕಾ ರಾಣಿ ಎಸ್ಟೇಟ್ ಬಳಿ ಈ ಘಟನೆ ತಡರಾತ್ರಿ ಸಂಭವಿಸಿದೆ. ತಲಘಟ್ಟಪುರದಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ಬಸ್ ನಲ್ಲಿ 13 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್ಸು ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳುತ್ತಿತ್ತು. ಅಪಘಾತದಿಂದಾಗಿ ಚಾಲಕನಿಗೆ ಗಾಯಗಳಾಗಿದ್ದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ರಸ್ತೆ ಮೇಲೆ ಬಸ್ ತೆರಳುತ್ತಿದ್ದ ಮಾರ್ಗದಲ್ಲೆ ಆನೆ ಏಕಾಏಕಿ ಓಡಿ ಬಂದಿದ್ದಾಗಿಯೂ, ಆ ಸಂದರ್ಭದಲ್ಲಿ ಬ್ರೇಕ್ ಹಾಕಿದರೂ ಬಸ್ಸು ಆನೆಗೆ ಡಿಕ್ಕಿ ಹೊಡೆದಿದ್ದಾಗಿ ಚಾಲಕ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದೆ.