ರೈತ ಹೋರಾಟಗಾರ ರಾಕೇಶ್ ಟಿಕಾಯತ್ಗೆ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದೆ.
ರಾಕೇಶ್ ಟಿಕಾಯತ್ಗೆ ಕರೆ ಮಾಡಿರುವ ಅಪರಿಚಿತನೊಬ್ಬ ನಿಂದನೆ ಮಾಡಿದ್ದಲ್ಲದೇ, ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಜಾಫರ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಯಾದವ್ ಅವರು, ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಅವರ ಚಾಲಕ ಪರ್ಜ್ವಲ್ ತ್ಯಾಗಿ ಅವರು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಹಿರಿಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ರಾಕೇಶ್ ಶರ್ಮಾ ಅವರು ಟಿಕಾಯತ್ ಅವರ ಮನೆಗೆ ಭೇಟಿ ನೀಡಿ ಮಾತನಾಡಲಾಗಿದೆ ಎಂದು ಹೇಳಿದ್ದಾರೆ.
ರಾಕೇಶ ಟಿಕಾಯತ್ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ 3 ಕೃಷಿ ಕಾಯ್ದೆಗಳ ವಿರುದ್ದ ದೆಹಲಿಯ ಗಡಿಯಲ್ಲಿ 1 ವರ್ಷಗಳ ಕಾಲ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಮಣಿದಿದ್ದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆದಿತ್ತು.