ಕರ್ನಾಟಕದಲ್ಲಿ ಇನ್ನು ಒಂದು ವರ್ಷದಲ್ಲಿ ಚುನಾವಣೆ ಇರುವ ಬೆನ್ನಲ್ಲೇ ರಾಷ್ಟ್ರೀಯ ಪಕ್ಷಗಳ ಮುಖಂಡರು ರಾಜ್ಯದತ್ತ ಪರೇಡ್ ಆರಂಭಿಸಿದ್ದಾರೆ. ಏಪ್ರೀಲ್ ಮೊದಲ ವಾರದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ರಾಜ್ಯಕ್ಕೆ ಬರುತ್ತಿದ್ದಾರೆ. ಮಾರ್ಚ್ 31 ರಂದು ಕಾಂಗ್ರೆಸ್ನ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಎರಡೂ ಪಕ್ಷಗಳ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. 1 ವರ್ಷದ ಮುಂಚಿತವಾಗಿಯೇ ರಾಜ್ಯದಲ್ಲಿ ಚುನಾವಣೆಯ ಕಾವು ಪಡೆದಂತೆ ಕಾಣುತ್ತಿದೆ.
ಇದೇ ಮಾರ್ಚ್ 31 ರಂದು ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಿದ್ದಗಂಗಾ ಶ್ರೀಗಳ 116 ನೇ ಜನ್ಮದಿನಾಚರಣೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಏಪ್ರೀಲ್ 1 ರಂದು ರಾಜ್ಯದ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿಯ ನಂತರ ಬಿಜೆಪಿಯ ದೊಡ್ಡ ತಾರಾಗಣವೇ ರಾಜ್ಯಕ್ಕೆ ಬರಲಿದೆ. ಮಾರ್ಚ್ 31 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬರಲಿದ್ದಾರೆ. ಏಪ್ರೀಲ್ 1 ರಂದು ಅಮಿತ್ ಷಾ ರಾಜ್ಯಕ್ಕೆ ಬರಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಏಪ್ರೀಲ್ 5 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.