ಜಮ್ಮು–ಕಾಶ್ಮೀರದ ಸೋಪೋರೆಯಲ್ಲಿ ಮಂಗಳವಾರ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ.
ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು ಸಾಕಷ್ಟು ವೈರಲ್ ಆಗಿದೆ.
ಸೋಪೋರೆಯಲ್ಲಿ ಸಿಆರ್ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ ಯಾರು ಎಂಬುದನ್ನು ಕಂಡುಹಿಡಿಯಲಾಗಿದೆ. ಆಕೆಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
https://youtu.be/18-r6tjB764