ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸೀವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ.
ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, ಹಲಾಲ್ ಕಟ್ ವಿಚಾರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಜನರನ್ನು ಎತ್ತಿಕಟ್ಟುತ್ತಿದ್ದೀರಿ. ಇಷ್ಟು ದಿನ ಇಲ್ಲದ ಈ ವಿಚಾರಗಳು ನೀವು ಬಂದ ಮೇಲೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಿಮ್ಮ ಬಿಜೆಪಿ ನಾಯಕರ ಕಥೆ ಏನಾಗಲಿದೆ ನೋಡ್ತಿರಿ ಎಂದಿದ್ದಾನೆ.
ಅನಾಮಧೇಯ ವ್ಯಕ್ತಿಯೊಬ್ಬ ಬುಧವಾರ ಬೆಳಗ್ಗೆ ಹಲವಾರು ಬಾರಿ ಕರೆ ಮಾಡಿದ್ದ. ಆದರೆ, ಕರೆ ಸ್ವೀಕರಿಸಿರಲಿಲ್ಲ. ಪುನಃ ಮಧ್ಯಾಹ್ನ 3 ಗಂಟೆ ವೇಳೆ ಕರೆ ಮಾಡಿದಾಗ ಸ್ವೀಕರಿಸಿದೆ. ಕೂಡಲೇ ಕರೆ ಮಾಡಿದ ವ್ಯಕ್ತಿ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದ. ಅಲ್ಲದೆ, ಶಾಸಕರಾದ ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೂ ನಿಂದಿಸಿದ.
ಜತೆಗೆ ಹರ್ಷನ ಕೊಲೆಯಾದಾಗ 25 ಲಕ್ಷ ರೂ. ನೀಡಿದ್ದೀರಿ, ಮುಸ್ಲಿಂ ಸತ್ತರೆ ಹಣ ನೀಡುವುದಿಲ್ಲ. ಹಿಜಾಬ್, ಮದರಸ, ಹಲಾಲ್ ಬಗ್ಗೆ ಮಾತನಾಡುತ್ತಿದ್ದೀರಿ, ಮುಂದೆ ಹೀಗೆಯೇ ಮಾತನಾಡಿದರೆ, ಇನ್ನು ಮೂರ್ನಾಲ್ಕು ದಿನಗಳಲ್ಲಿ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ರೇಣುಕಾಚಾರ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನೀನ್ನೊಬ್ಬನನ್ನೇ ಅಲ್ಲ ಸಿ ಟಿ ರವಿ, ಯತ್ನಾಳ್ ಅವರನ್ನು ಸಹ ಬಿಡಲ್ಲ ಅಂತ ಬಿಜೆಪಿ ನಾಯಕರನ್ನು ಅವಾಚ್ಯ ಪದಗಳಿಂದ ಬೈದಿದ್ದಾನೆ. ಸದ್ಯ ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರ ಪ್ರಾಥಮಿಕ ಮಾಹಿತಿಯಲ್ಲಿ ಇಂಟರ್ನೆಟ್ ಕಾಲ್ ಬಳಸಿ ಮಾತಾಡಿರುವುದು ತಿಳಿದಿದೆ.
https://youtu.be/Xnl9XQVAiZk