ರಾಜ್ಯ ರೈತ ಸಂಘದಿಂದ ರಾಜ್ಯದಲ್ಲಿ ನೂತನ ರಾಜಕೀಯ ಪಕ್ಷ ಸ್ಥಾಪನೆ ಮಾಡಲಾಗುವುದು. ಇದೇ ಏ.21 ರಂದು ರಾಜಕೀಯ ಪಕ್ಷದ ಸ್ಥಾಪನೆಯ ಬಗ್ಗೆ ಅಧಿಕೃತವಾಗಿ ಹೇಳಲಾಗುವುದು ಎಂದು ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏ.21 ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ರೈತ ಸಂಘದ ಬೃಹತ್ ಸಮಾವೇಶದಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು.
ರಾಜ್ಯದ ರೈತರು ಬೇರೆ ಬೇರೆಯವರನ್ನು ನಂಬಿ ಪದೇ ಪದೇ ಮೋಸ ಹೋಗುವುದು ಸಾಕು. ನಮ್ಮ ಕೆಲಸವನ್ನು ನಾವೇ ಮಾಡಿಕೊಳ್ಳಲು ಅಣಿಯಾಗಬೇಕಿದೆ. ಹೀಗಿರುವ ರಾಜಕೀಯ ಪಕ್ಷಗಳಿಗೆ, ವ್ಯಕ್ತಿಗಳಿಗೆ ಸಿದ್ಧಾಂತ ಗಳಿಲ್ಲ. ವೈಯಕ್ತಿಕ ಶಿಸ್ತು ಮೊದಲೇ ಇಲ್ಲ. ಇಂತಹವರಿಂದ ನಮ್ಮ ಉದ್ಧಾರದ ನಿರೀಕ್ಷೆ ಮೂರ್ಖತನ ಎಂದರು.
ಪರ್ಯಾಯ ರಾಜಕೀಯ ಪಕ್ಷದ ಹೆಸರು ಮತ್ತು ಚಿಹ್ನೆ ತೀರ್ಮಾನ ವಾಗಿಲ್ಲ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗು ವುದು. ಎಲ್ಲ ಸಮುದಾಯ ಒಳಗೊಂಡ ರೈತ ಸಂಘದ ವಿಚಾರದ ಬಗ್ಗೆ ನಂಬಿಕೆ-ವಿಶ್ವಾಸ ಹೊಂದಿ ರುವರನ್ನು ಅಭ್ಯರ್ಥಿಗಳನ್ನಾಗಿ ಮಾಡ ಲಾಗುವುದು. ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಮೂರು ರೈತ ವಿರೋಧಿ ಕಾಯ್ದೆ ಹಿಂಪಡೆದುಕೊಂಡಿದೆ.
ಆದರೆ ರಾಜ್ಯ ಸರಕಾರ ಈ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿಲ್ಲ. ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಏ.21ರಂದು ನಡೆಸಲಾಗುವುದು. ಕಾಯ್ದೆಗಳನ್ನು ಹಿಂಪಡೆಯದಿದ್ದರೇ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
https://youtu.be/MytNDW8fxFY