ಐಪಿಎಲ್ 2022 ಟೂರ್ನಿಯಲ್ಲಿ ಸತತ ಐದು ಸೋಲುಗಳ ಮುಖಭಂಗಕ್ಕೆ ಒಳಗಾಗಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಕಹಿ ಸುದ್ದಿ ಎದುರಾಗಿದ್ದು, ತಂಡದ ನಾಯಕ ರೋಹಿತ್ ಶರ್ಮಾಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ನಿಧಾನಗತಿಯ ಓವರ್ರೇಟ್ಗಾಗಿ ಮುಂಬೈ ನಾಯಕ ರೋಹಿತ್ ಶರ್ಮಾ ಮೇಲೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೇ, ಪ್ಲೇಯಿಂಗ್ ಇಲೆವೆನ್ನ ಉಳಿದ ಆಟಗಾರರ ಮೇಲೆ ಪಂದ್ಯ ಶುಲ್ಕದ ಶೇ 25 ರಷ್ಟು ತಲಾ 6 ಲಕ್ಷ ರೂ.ದಂಡ ಹೇರಲಾಗಿದೆ.
ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 12 ರನ್ ಅಂತರದ ಗೆಲುವು ದಾಖಲಿಸಿತ್ತು. ಒಟ್ಟಿನಲ್ಲಿ ಮುಂಬೈಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪ್ರಸಕ್ತ ಸಾಲಿನಲ್ಲಿ ಐಪಿಎಲ್ ನಿಯಾಮವಳಿ ಅನ್ವಯ ನಿಧಾನಗತಿಯ ಬೌಲಿಂಗ್ಗಾಗಿ ರೋಹಿತ್ ಶರ್ಮಾ ಎರಡನೇ ಬಾರಿ ದಂಡನೆಗೊಳಗಾಗಿದ್ದಾರೆ. ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 12 ಲಕ್ಷ ರೂ. ದಂಡಕ್ಕೆ ಗುರಿಯಾಗಿದ್ದರು.