ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಮೂಲದ ಸುನಿಲ್ ಬಂಧಿತ ಆರೋಪಿ.
ಈ ಹಿಂದೆ ಸಿಐಡಿ ಅಧಿಕಾರಿಗಳು ಪಿಎಸ್ಐ ನೇಮಕಾತಿಯಲ್ಲಿ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು.
ಈ ಪೈಕಿ ಆರೋಪಿ ಸುನಿಲ್ಗೂ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಸುನಿಲ್ ಓಎಂಆರ್ ಶೀಟ್ನಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಕಲಬುರಗಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.