ಉಡುಪಿಯ ಉಡುಪಿ ಫ್ರೌಢಶಾಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ತನ್ನ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ (42) ಎಂದು ಗುರುತಿಸಲಾಗಿದೆ. ರಾಜೇಶ್ ಅವರು ಆದಿ ಉಡುಪಿ ಶಾಲೆಯಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕಾವಲು ಕರ್ತವ್ಯದಲ್ಲಿದ್ದರು. ರಾತ್ರಿ ವೇಳೆಯಲ್ಲಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅವರು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿದ್ದರು ಎಂದು ತಿಳಿದು ಬಂದಿದೆ. ಆದರೆ ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.
ಸಹೋದ್ಯೋಗಿಯೊಂದಿಗೆ ಜಗಳವಾಡಿದ್ದಕ್ಕಾಗಿ ಈ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ಅಮಾನತುಗೊಂಡಿದ್ದ ರಾಜೇಶ್ ಅವರನ್ನು ಡಿಎಆರ್ಗೆ ವರ್ಗಾಯಿಸಲಾಗಿತ್ತು.