ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕೃತವಾಗಿ ಬಿಜೆಪಿ ಸೇರಿದೆ. ಜೆಡಿಎಸ್ಗೆ ವಿದಾಯ ಹೇಳಿದ ಹೊರಟ್ಟಿಯವರು ತೆನೆ ಹೊರೆ ಇಳಿಸಿ ಕಮಲ ಮುಡಿದಿದ್ದಾರೆ.
ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಆಗಿ ಬಿಜೆಪಿ ಸೇರ್ಪಡೆ ಆದರು. ಈ ಮೂಲಕ 42 ವರ್ಷಗಳ ಜನತಾ ಪರಿವಾರದ ನಂಟನ್ನು ತೊರೆದರು.
ಶಿಕ್ಷಕರ ಕ್ಷೇತ್ರದಿಂದ ಹೊರಟ್ಟಿಯವರು ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಲಿದ್ದು, ಶೀಘ್ರವೇ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಹುಬ್ಬಳ್ಳಿ ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನಪರಿಷತ್ ಸಭಾ ನಾಯಕ ಕೋಟಾ ಶ್ರೀನಿವಾಸಪೂಜಾರಿ ಮತ್ತು ಕಂದಾಯ ಸಚಿವ ಆರ್ ಅಶೋಕ್ ಕೂಡಾ ಹಾಜರಿದ್ದರು.
ಹೊರಟ್ಟಿಯವರ ಬಿಜೆಪಿ ಸೇರ್ಪಡೆಗೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಬಿಜೆಪಿ ನಾಯಕರೇ ಆಕ್ಷೇಪಗಳನ್ನು ಎತ್ತಿದ್ದಾರೆ. `ಕರೆಯದೇ ಹೊರಟ್ಟಿಯವರು ಹೇಗೆ ಬಿಜೆಪಿಗೆ ಬರ್ತಾರೆ’ ಎಂದು ವ್ಯಂಗ್ಯವಾಡಿದ್ದರು ಕೂಡಾ.