ರಾಜಧಾನಿ ಬೆಂಗಳೂರಲ್ಲಿ ಗುಂಡಿ ಅವಾಂತರಕ್ಕೆ ಕೆಎಸ್ಆರ್ಟಿಸಿ ಬಸ್ವೊಂದು ನಮ್ಮ ಮೆಟ್ರೋ ರೈಲು ಮಾರ್ಗದ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಅವಘಢ ಸಂಭವಿಸಿದೆ. ಬಸ್ನಲ್ಲಿದ್ದ 29 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆಯಲ್ಲಿ ಗುಂಡಿಯಿದ್ದ ಕಾರಣ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ನಮ್ಮ ಮೆಟ್ರೋ ರೈಲು ಮಾರ್ಗದ ಪಿಲ್ಲರ್ ಸಂಖ್ಯೆ 545ಕ್ಕೆ ಡಿಕ್ಕಿ ಹೊಡೆದಿದೆ. ಕೆಎಸ್ಆರ್ಟಿಸಿ ಬಸ್ ಮುಂಭಾಗ ನಜ್ಜುಗುಜ್ಜಾಗಿದೆ.