ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ಅಕಾಲಿಕ ನಿಧನ ಹೊಂದಿದ್ದಾರೆ.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಪುತ್ರಿ ಗೌರಿ ಅಲಿಯಾಸ್ ರಿಷಿ ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದರು.
3 ವರ್ಷದ ಗೌರಿಗೆ ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಗೌರಿ ಇಂದು ನಸುಕಿನ ಜಾವ ಇಹಲೋಕ ತ್ಯಜಿಸಿದ್ದಾರೆ..
ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದಲ್ಲಿರುವ GT ದೇವೇಗೌಡರ ತೋಟದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.