ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿಗಳಲ್ಲಿ ಒಬ್ಬರಾಗಿದ್ದ ಎಜಿ ಪೆರಾರಿವಾಲನ್ ಅವರನ್ನು ಜೈಲಿನಿಂದು ಬಿಡುಗಡೆಗೊಳಿಸಿ ಸುಪ್ರಿಂಕೋರ್ಟ್ ಆದೇಶ ಹೊರಡಿಸಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿ ಎಜಿ ಪೆರಾರಿವಾಲನ್ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು.
30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ಅವರನ್ನು ಬಿಡುಗಡೆಗೊಳಿಸುವಂತೆ ಸುಪ್ರಿಂಕೋರ್ಟ್ ಇಂದು ತೀರ್ಪು ನೀಡಿದೆ.
21 ಮೇ 1991 ರಂದು ತಮಿಳುನಾಡಿನಲ್ಲಿ ಆತ್ಮಹತ್ಯಾ ಬಾಂಬರ್ಗಳು ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರ ಅವರ ಹತ್ಯೆ ಮಾಡಿದ್ದರು. ಈ ಕೃತ್ಯದಲ್ಲಿ ಎಲ್ಟಿಟಿಇ ಹಾಗೂ ಖಲಿಸ್ತಾನ ಪ್ರತ್ಯೇಕತಾವಾಧಿಗಳು ಭಾಗಿಯಾಗಿದ್ದರು.