ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಿಧು ಅವರನ್ನು ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಹೇಳಿದೆ.
34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10 ರಲ್ಲಿ ಇರಿಸಲಾಗಿತ್ತು.
ಅವರ ಜತೆ ಕೊಠಡಿಯಲ್ಲಿ ಇನ್ನೂ ನಾಲ್ಕು ಕೈದಿಗಳು ಇದ್ದಾರೆ ಎಂದು ಕಾರಾಗೃಹದ ಮೂಲಗಳು ಶನಿವಾರ ಹೇಳಿದ್ದವು.