ಮೊಮ್ಮಗಳ ಅಗಲಿಕೆಯ ಶೋಕದಲ್ಲಿರುವ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಮೈಸೂರು ತಾಲೂಕಿನಲ್ಲಿರುವ ಗುಂಗ್ರಾಲಗ್ಛತ್ರ ಗ್ರಾಮದಲ್ಲಿರುವ ಜಿಟಿಡಿ ನಿವಾಸದಲ್ಲಿ ಭೇಟಿ ಆದ ಡಿಕೆಶಿ ಸಾಂತ್ವನ ಹೇಳಿದರು.
ಈ ವೇಳೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮತ್ತು ಮಾಜಿ ಸಚಿವ ಚಲುವರಾಯಸ್ವಾಮಿ ಕೂಡಾ ಜೊತೆಗಿದ್ದರು.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡಾ ಜಿಟಿಡಿ ಮನೆಗೆ ತೆರಳಿ ಸಾಂತ್ವನ ಹೇಳಿದ್ದರು.