ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದಿದ್ದಾರೆ. ಕಾಂಗ್ರೆಸ್ ತೊರೆದಿರುವ ಸಿಬಲ್ ಸಮಾಜವಾದಿ ಪಕ್ಷದಿಂದ ರಾಜ್ಯಸಭಾ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ.
ಉತ್ತರಪ್ರದೇಶದಿಂದ ಕಪಿಲ್ ಸಿಬಲ್ ಅವರನ್ನು ಸಮಾಜವಾದಿ ಪಕ್ಷ ರಾಜ್ಯಸಭೆಗೆ ಕಳುಹಿಸಲಿದೆ.
ಮೇ 16ರಂದೇ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾಗಿ 73 ವರ್ಷದ ಕಪಿಲ್ ಸಿಬಲ್ ಅವರು ಹೇಳಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಪರ ಸುಪ್ರೀಂಕೋರ್ಟ್ನಲ್ಲಿ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಹಲವು ಕೇಸ್ಗಳಲ್ಲಿ ಜೈಲಿನಲ್ಲಿದ್ದ ಅಜಂಖಾನ್ ಸುಪ್ರೀಂಕೋರ್ಟ್ನಿAದ ಜಾಮೀನು ಪಡೆದು ಬಿಡುಗಡೆ ಆಗಿದ್ದಾರೆ.