ಕಲಬುರಗಿಯ ಕಮಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕ್ಯಾಂಟರ್ ನಡುವೆ ಡಿಕ್ಕಿಯಾಗಿ, ಬಸ್ ಧಗಧಗಿಸಿದೆ.
ಘನಘೋರ ದುರಂತದಲ್ಲಿ ಏಳು ಮಂದಿ ಪ್ರಯಾಣಿಕರು ಸಜೀವ ದಹನ ಆಗಿದ್ದಾರೆ. ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬಸ್ ಗೋವಾದಿಂದ ಹೈದರಾಬಾದ್ ಕಡೆಗೆ ಪ್ರಯಾಣ ಬೆಳೆಸಿತ್ತು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಕ್ಯಾಂಟರ್ ಚಾಲಕನ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.