ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷ ಸಂಘಟನೆಯಲ್ಲಿ ರಕ್ಷಾ ರಾಮಯ್ಯ ಸೇವೆಯನ್ನು ಪರಿಗಣಿಸಿ, ಅವರನ್ನು ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲು ಸಂತೋಷಿಸುತ್ತಿದ್ದೇವೆ
ಎಂದು ಭಾರತೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಅವರು ತಿಳಿಸಿದ್ದಾರೆ.
ಈ ಹಿಂದೆ ರಕ್ಷಾ ರಾಮಯ್ಯ ಅವರು ಕರ್ನಾಟಕ ಯುವ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷರಾಗಿದ್ದರು. ಆದರೆ ಆ ಬಳಿಕ ಅವರು ತಮ್ಮ ಸ್ಥಾನವನ್ನು ಮೊಹಮ್ಮದ್ ನಲಪಾಡ್ ಅವರಿಗೆ ಬಿಟ್ಟು ಕೊಡಬೇಕಾಯಿತು.