ಹಿಂದಿ ಭಾಷೆಯ ಹೇರಿಕೆಯ ಕುರಿತಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚರ್ಚೆ ಮುಂದುವರಿಯುತ್ತಿರುವ ಬೆನ್ನಲ್ಲೇ, ‘ಹಿಂದಿ ಭಾಷೆ ಶೂದ್ರರಿಗೆ ಮಾತ್ರ ಮೀಸಲು’ ಎಂದು ಡಿಎಂಕೆ ಸಂಸದ ಟಿಕೆಎಸ್ ಇಳಂಗೋವನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಂತಹ ಹಿಂದುಳಿದ ರಾಜ್ಯಗಳಲ್ಲಿ ಮಾತ್ರ ಹಿಂದಿ ಸ್ಥಳೀಯ ಭಾಷೆಯಾಗಿದೆ. ಹಿಂದಿ ನಮ್ಮನ್ನು ಶೂದ್ರರನ್ನಾಗಿ ಪರಿವರ್ತಿಸುತ್ತದೆ. ಹಿಂದಿ ಭಾಷೆಯಿಂದ ನಮಗೆ ಒಳಿತಾಗುವುದಿಲ್ಲ ಎಂದು ಟಿಕೆಎಸ್ ಇಳಂಗೋವನ್ ಹೇಳಿದರು.
ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ಪಂಜಾಬ್ ಇವೆಲ್ಲವೂ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲವೇ? ಹಿಂದಿ ಈ ರಾಜ್ಯಗಳ ಜನರ ಮಾತೃಭಾಷೆಯಲ್ಲ.
ಏಪ್ರಿಲ್ನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ನವದೆಹಲಿಯಲ್ಲಿ ನಡೆದ ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹಿಂದಿಯನ್ನು ಇಂಗ್ಲಿಷ್ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಮತ್ತು ಸ್ಥಳೀಯ ಭಾಷೆಗಳಿಗೆ ಅಲ್ಲ ಎಂದು ಹೇಳಿದ್ದರು.