ರಾಜ್ಯಸಭಾ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಒಬ್ಬ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ.
ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ಗೆ ತಮ್ಮ ಮೊದಲ ಪ್ರಾಶಸ್ತö್ಯದ ಮತ ಹಾಕಿದ್ದಾರೆ.
`ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾಗಿ’ ಮತದಾನದ ಬಳಿಕ ಶ್ರೀನಿವಾಸ್ಗೌಡ ಒಪ್ಪಿಕೊಂಡಿದ್ದಾರೆ.
ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರ ವಿಧಾನಸೌಧಕ್ಕೆ ಶ್ರೀನಿವಾಸ್ಗೌಡ ಅವರು ಮತದಾನದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆದರು.
ಈ ಮೂಲಕ ಜೆಡಿಎಸ್ ಬಲ 32ರಿಂದ 31ಕ್ಕೆ ಕುಸಿದಿದೆ. ಶ್ರೀನಿವಾಸ್ಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಜೆಡಿಎಸ್ ಸ್ಪೀಕರ್ಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ನಿರಾಕರಣೆ ಮಾಡಿರುವುದೇ ಅಡ್ಡಮತದಾನಕ್ಕೆ ಪ್ರಮುಖ ಕಾರಣ ಎನ್ನಲಾಗಿದ್ದು, ಇವರು ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆ ಆಗಲಿದ್ದಾರೆ.