ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿಯವರು ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಜುಲೈ 3 ರಂದು ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ ಸಿನಿ ಶೆಟ್ಟಿ ಅವರು ಫೆಮಿನಾ ಮಿಸ್ ಇಂಡಿಯಾ 2022 ಪ್ರಶಸ್ತಿಯನ್ನು ಗೆದ್ದಿದ್ದಾರೆ. ರಾಜಸ್ಥಾನದ ರೂಬಲ್ ಶೆಖಾವತ್ ಮಿಸ್ ಇಂಡಿಯಾ 2022ರ ಮೊದಲ ರನ್ನರ್ ಅಪ್ ಆದರೆ, ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಮಿಸ್ ಇಂಡಿಯಾ 2022 ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.
ಫೆಮಿನಾ ಮಿಸ್ ಇಂಡಿಯಾ 2021ರ ಮಾನಸ ವಾರಣಾಸಿ, ಮಿಸ್ ಇಂಡಿಯಾ 2022 ಸಿನಿ ಶೆಟ್ಟಿಗೆ ಕಿರೀಟವನ್ನು ಮುಡಿಗೇರಿದ್ದಾರೆ. ಸಿನಿ ಶೆಟ್ಟಿ, ರುಬಲ್ ಶೇಖಾವತ್, ಶಿನತಾ ಚೌಹಾಣ್, ಪ್ರಜ್ಞಾ ಅಯ್ಯಗಾರಿ ಮತ್ತು ಗಾರ್ಗೀ ನಂದಿ ಮೊದಲ ಐದು ಸ್ಥಾನದಲ್ಲಿದ್ದಾರೆ.
ಕರ್ನಾಟಕದ ಮೂಲದ ಸಿನಿ ಶೆಟ್ಟಿ ಸಿನಿ ಶೆಟ್ಟಿ ಅವರು ಮುಂಬೈನಲ್ಲಿ ಜನಿಸಿದ್ದಾರೆ. ಅಕೌಂಟಿಂಗ್ ಮತ್ತು ಫೈನಾನ್ಸ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ ವೃತ್ತಿಪರ ಕೋರ್ಸ್ ಮಾಡುತ್ತಿದ್ದಾರೆ. ನಾಲ್ಕನೇ ವಯಸ್ಸಿನಲ್ಲಿ ನೃತ್ಯ ಮಾಡಲು ಪ್ರಾರಂಭಿಸಿದ ಸಿನಿ ಶೆಟ್ಟಿ ಅವರು, ಹದಿನಾಲ್ಕನೇ ವಯಸ್ಸಿನಲ್ಲಿ ಭರತನಾಟ್ಯ ರಂಗ ಪ್ರವೇಶವನ್ನು ಮಾಡಿದ್ದರು.