ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
4 ಜನ ಸಚಿವರು ಬೋರಿಸ್ ಜಾನ್ಸನ್ ಸರ್ಕಾರದಲ್ಲಿದ್ದ 4 ಜನ ಹಿರಿಯ ಸಚಿವರು ರಾಜೀನಾಮ ಸರ್ಕಾರ ಅಸ್ಥಿರತೆಗೆ ಕಾರಣವಾಗಿದೆ.
ಸಚಿವರ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಸಚಿವರು ಬೋರಿಸ್ ಜಾನ್ಸನ್ರ ರಾಜೀನಾಮೆ ಕೇಳಿದ್ದರು. ಆದರೆ, ಬೋರಿಸ್ ಇದಕ್ಕೆ ಒಪ್ಪದೇ ತಮ್ಮ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ, ಆಡಳಿತ ಕನ್ಸರ್ವೇಟಿವ್ ಪಕ್ಷ (Conservative Party) ಪಕ್ಷದ 40 ಸಂಸದರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮದೇ ಪಕ್ಷದ ಸಂಸದರು ಪ್ರಧಾನಿ ಬೋರಿಸ್ ಜಾನ್ಸನ್ರನ್ನು ವಿರೋಧಿಸಿ ರಾಜೀನಾಮೆ ನೀಡುತ್ತಿದ್ದಾರೆ. ಈ ಕಾರಣದಿಂದ ತಮ್ಮ ಸರ್ಕಾರ ಉಳಿಸಿಕೊಳ್ಳಲು, ಬೋರಿಸ್ ಜಾನ್ಸನ್ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.