ಪರಿಶಿಷ್ಟ ಜಾತಿಗೆ ಶೇಕಡಾ 17ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ನಡೆಸುತ್ತಿರುವ ನಿರಶನ ಜುಲೈ 11ರಂದು 152ನೇ ದಿನಕ್ಕೆ ಪ್ರವೇಶಿಸಲಿದೆ
ಈ ಹಿನ್ನೆಲೆಯಲ್ಲಿ ಜುಲೈ 11ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ.
ಈ ಬಗ್ಗೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಮಾಹಿತಿ ನೀಡಿದೆ.
150 ದಿನಗಳಿಂದ ಸ್ವಾಮೀಜಿ ಆಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರೂ ಇದುವರೆಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ ಮತ್ತು ಆ ಮೂಲಕ ಸರ್ಕಾರ ಉದ್ದೇಶಪೂರ್ವಕವಾಗಿಯೇ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟವನ್ನು ಕಡೆಗಣಿಸುತ್ತಿದೆ ಎನ್ನುವುದು ಎರಡೂ ಸಮುದಾಯದವರ ಸಿಟ್ಟಿಗೆ ಕಾರಣವಾಗಿದೆ.