ಪ್ರಾತಿನಿಧಿಕ ಚಿತ್ರ:
ಮಂಗಳೂರಲ್ಲಿ ಕೇಂದ್ರ ಕಚೇರಿ ಹೊಂದಿರುವ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹಿರಿಯ ವಕೀಲ ಪಿ ಪಿ ಹೆಗ್ಡೆ ಅವರ ಮಾತೃಶ್ರೀ ಶ್ಯಾಮಲಾದೇವಿ ಅವರ ಸ್ಮರಣಾರ್ಥ ಜೈನ ವಿದ್ಯಾರ್ಥಿಗಳಿಂದ ವಿದ್ಯಾಥಿರ್ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದವರಿಗೆ ವಿದ್ಯಾರ್ಥಿ ವೇತನ: ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರ: ಜೊತೆಗೆ ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು ಇನ್ನಿತರ ಉನ್ನತ ವ್ಯಾಸಂಗ ಮಾಡುತ್ತಿರುವ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೂ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ ಅಂಕಪಟ್ಟಿ, ಶೈಕ್ಷಣಿಕ ದಾಖಲೆ, ಮೊಬೈಲ್ ಸಂಖ್ಯೆ, ಇ-ಮೇಲ್, ಅರ್ಜಿದಾರರ ಭಾವಚಿತ್ರವನ್ನು ಲಗತ್ತಿಸಬೇಕು.
ಒಂದು ವೇಳೆ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಿದ್ಯಾರ್ಥಿ ಅಥವಾ ಅವರ ಹೆತ್ತವರು ಖಾತೆಯನ್ನು ಹೊಂದಿದ್ದಲ್ಲಿ ಆ ಬಗ್ಗೆ ಅರ್ಜಿಯಲ್ಲಿ ಉಲ್ಲೇಖ ಮಾಡಬೇಕು.
ಅವಿಭಜಿತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಯಾವ ವಿಭಾಗದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಿ ಎಂದು ನಮೂದಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 5
ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಆದ ವಿದ್ಯಾರ್ಥಿಗಳಿಗೆ ಇಮೇಲ್, ಮೊಬೈಲ್ ಎಸ್ಎಂಎಸ್ ಮೂಲಕ ತಿಳಿಸಲಾಗುತ್ತದೆ.
ವಿದ್ಯಾರ್ಥಿ ವೇತನ ದಿನ: ಆಗಸ್ಟ್ 14, ತಕ್ಷಿಲ, ಬಲ್ಲಾಳ್ಭಾಗ್, ಮಂಗಳೂರು
ಅರ್ಜಿಯನ್ನು mccs.schlr@gmail.com ಗೆ ಮೇಲ್ ಮಾಡಬಹುದು ಅಥವಾ ಹತ್ತಿರದ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಶಾಖೆಗೆ ತೆರಳಿ ಸಲ್ಲಿಸಬಹುದು.