ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದು ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ತೀವ್ರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ 3 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇಂದು ತೀವ್ರ ಮಳೆಯಾಗುವವ ಸಂಭವ ಇರುವುದರಿಂದ ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಹೊಸ ನಗರ ತಾಲೂಕಿನ ಪ್ರಾಥಮಿಕ ಮತ್ತು ಫ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.