ADVERTISEMENT
ಸರ್ಕಾರಿ ಉದ್ಯೋಗಕ್ಕೆ 50 ಸಾವಿರ ಸ್ಪರ್ಧಾಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಬಗ್ಗೆ ರಾಜ್ಯ ಸರ್ಕಾರದ ಯೋಜನೆ ಮೊದಲ ಹಂತದ ಅನುಷ್ಠಾನಕ್ಕೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಪರಿಶಿಷ್ಟ ಪಂಗಡ ಇಲಾಖೆ, ಅಲ್ಪಸಂಖ್ಯಾತ ಇಲಾಖೆಯಿಂದ ಉಚಿತ ತರಬೇತಿಯನ್ನು ನೀಡಲಾಗುತ್ತದೆ.
ಮೊದಲ ಹಂತದಲ್ಲಿ 15 ಸಾವಿರ ಸ್ಪಧಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುತ್ತದೆ.
ಯುಪಿಎಸ್ಸಿ, ಕೆಎಎಸ್, ಗ್ರೂಪ್ -ಸಿ, ಆರ್ಆರ್ಬಿ, ಬ್ಯಾಂಕಿಂಗ್ ಮತ್ತು ಎಸ್ಎಸ್ಸಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.
ADVERTISEMENT