ವಿದ್ಯುತ್ ತಂತಿ ಬಿದ್ದು 12 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಸಿಮ್ರಾನ್ ಬಾನು ಬಡಿಗೇರ್ ಮೃತ ದುರ್ದೈವಿ. ಮನೆ ಮುಂದೆ ಪಾತ್ರೆ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಆಕೆಯ ಮೇಲೆ ಬಿದ್ದಿದೆ. ಕೂಡಲೇ ಆಕೆ ಓಡಿ ಹೋಗಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಐದು ವರ್ಷಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ ಇಂತಹ ಘಟನೆಗಳಿಂದ ಹತ್ತು ಸಾವುಗಳು ವರದಿಯಾಗಿವೆ. ಜನರು ಜಾಗರೂಕರಾಗಿರಬೇಕು ಎಂದು ಕಲಘಟಕಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತೂಗಾಡುತ್ತಿರುವ ಕೇಬಲ್ ಅಥವಾ ಅಪಾಯ ಕಂಡುಬಂದಲ್ಲಿ, ಜನರು ತಕ್ಷಣ ಪೊಲೀಸ್ ಅಥವಾ ಹೆಸ್ಕಾಂ ಸಿಬ್ಬಂದಿಗೆ ತಿಳಿಸಬೇಕು ಎಂದು ಹೇಳಿದ್ದಾರೆ. ಭಾರೀ ಮಳೆ ಹಾಗೂ ಗಾಳಿಯಿಂದಾಗಿ ವಿದ್ಯುತ್ ಕಂಬಗಳು ವಾಲುತ್ತಿರುವುದು ಇಂತಹ ಅವಘಡಗಳಿಗೆ ಕಾರಣವಾಗಿದೆ ಎಂದು ಹೆಸ್ಕಾಂ ಅಭಿಯಂತರ ಬಿ.ಹೊನ್ನೂರಪ್ಪ ತಿಳಿಸಿದ್ದಾರೆ.