ಚಾಕ್ಲೆಟ್ ಸಮೇತ ಚಾಕ್ಲೆಟ್ ಕವರ್ ನುಂಗಿ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಬಾಲಕಿಯನ್ನು ಸಮನ್ವಿ (6) ಎಂದು ಗುರುತಿಸಲಾಗಿದ್ದು, ಈಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಮೂಲದ ನಿವಾಸಿ. ಸಮನ್ವಿ ಉಪ್ಪುಂದದ ಆಂಗ್ಲ ಮಾಧ್ಯಮ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದಾಳೆ.
ಶಾಲೆಯ ಬಸ್ಸಿಗೆ ಕಾಯುತ್ತಿರುವ ಸಮಯದಲ್ಲಿ ಸಮನ್ವಿ ಪ್ಲಾಸ್ಟಿಕ್ ಕವರ್ ಸಮೇತ ಚಾಕ್ಲೆಟ್ ತಿಂದಿದ್ದಾಳೆ. ಹೀಗೆ ತಿಂದ ಚಾಕ್ಲೆಟ್ ಬಾಲಕಿ ಗಂಟಲಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಶಾಲಾ ವಾಹನದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ.
ಸದ್ಯ ಬಾಲಕಿಯ ಮೃತದೇಹವನ್ನು ಮಣಿಪಾಲ್ ಕೆ.ಎಂ.ಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.