ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ತಮ್ಮ ಮೇಲೆ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಮೇಲೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣಗಳನ್ನು ತಡೆಯಿಡಿಯುವಂತೆ ಬಿಎಸ್ವೈ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ಪರಿಶೀಲಿಸಿರುವ ಸುಪ್ರೀಂಕೋರ್ಟ್ ಯಡಿಯೂರಪ್ಪನವರ ಮೇಲೆ ರಾಜ್ಯ ಹೈಕೋರ್ಟ್ನಲ್ಲಿ ನಡೆಯುತ್ತಿರುವ ಕ್ಇಮಿನಲ್ ಪ್ರಕರಣಕ್ಕೆ ತಡೆ ನೀಡಿದೆ.
ಭೂಮಿ ಹಂಚಿಕೆ ಪ್ರಕರಣದಲ್ಲಿ ತಮ್ಮ ಮೇಲಿನ ಪ್ರಕರಣವನ್ನು ರದ್ದು ಪಡಿಸುವಂತೆ ಹೈಕೋರ್ಟ್ಗೆ ಸಲ್ಲಿಸಿದ್ದ ಮನವಿಯನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿತ್ತು.
2006-7 ರಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಇವರ ಮೇಲಿತ್ತು.
ಬಿಎಸ್ ಯಡಿಯೂರಪ್ಪನವರು ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿಯಲ್ಲಿ ಅಕ್ರಮ ಭೂಮಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು 2013 ರಲ್ಲಿ ವಸುದೇವ ರೆಡ್ಡಿಯವರು ಖಾಸಗಿ ದೂರು ದಾಖಲಿಸಿದ್ದರು.