ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್ನಲ್ಲಿ ಇಂದು (ಶನಿವಾರ) ಬೆಳಗಿನ ಜಾವ 2.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕನ್ವರ್ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್ಗೆ ಹೋಗುತ್ತಿದ್ದರು. ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.
ಕನ್ವರ್ ಭಕ್ತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುವನ್ನು ಆಗ್ರಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.