ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಯನ್ನು ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.
ಛತ್ತೀಸ್ಗಢದ ರಾಜಧಾನಿ ರಾಯ್ಪುರದ ಕಯಾಬಂಧದ ಟ್ರಾಫಿಕ್ ಕಾನ್ಸ್ಟೇಬಲ್ ನಿಲಂಬರ್ ಸಿನ್ಹಾ ಅವರಿಗೆ ಶನಿವಾರ ಬೆಳಗ್ಗೆ ಮಾನಾ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆಯೊಂದರಲ್ಲಿ ಬ್ಯಾಗ್ವೊಂದು ಕಂಡುಬಂದಿದೆ. ನಂತರ ಬ್ಯಾಗ್ ಜೀಪ್ ತೆಗೆದು ಪರಿಶೀಲನೆ ನಡೆಸಿದಾಗ 2000 ಮತ್ತು 500 ರೂಪಾಯಿ ನೋಟುಗಳಿರುವ 45 ಲಕ್ಷ ರೂಪಾಯಿ ಪತ್ತೆಯಾಗಿದೆ.
ಬಳಿಕ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಿಲಂಬರ್ ಸಿನ್ಹಾ ಅವರು, ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಬ್ಯಾಂಕ್ ತೆಗೆದುಕೊಂಡು ಬಂದು ಹಣವನ್ನು ಹಿಂದಿರುಗಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಖನಂದನ್ ರಾಥೋರ್ ಹೇಳಿದ್ದಾರೆ.