ಭಾರತದ 15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಳಗೊಂಡಂತೆ ಗಣ್ಯರು ಪಾಲ್ಗೊಂಡಿದ್ದರು.
ದ್ರೌಪದಿ ಮುರ್ಮು ಅವರು ಸ್ವತಂತ್ರ ಭಾರತದ ಮೊದಲ ಬುಡುಕಟ್ಟು ಸಮುದಾಯಕ್ಕೆ ಸೇರಿದ ರಾಷ್ಟ್ರಪತಿ ಆಗಿದ್ದಾರೆ.
ಸ್ವತಂತ್ರ ಭಾರತದಲ್ಲಿ ಜನಿಸಿ ರಾಷ್ಟ್ರಪತಿ ಆದ ಮೊದಲ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆ ಕೂಡಾ ದ್ರೌಪದಿ ಮುರ್ಮು ಅವರದ್ದು