ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಆಣೆಕಟ್ಟಿಗೆ ನುಗ್ಗಲು ಯತ್ನಿಸಿದ ಬುರ್ಖಾಧಾರಿ (Burqa weared person) ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಬೆಳ್ಳಂಬೆಳಿಗ್ಗೆಯೇ ಆಲಮಟ್ಟಿ ಜಲಾಶಯ ಪ್ರವೇಶಕ್ಕೆ ಬುರ್ಖ ಧರಿಸಿದ ವ್ಯಕ್ತಿ ಯತ್ನಿಸಿದ್ದಾನೆ. ಇಷ್ಟು ಬೇಗ ಬಿಡುವುದಿಲ್ಲ ಎಂದು ಪೊಲೀಸರು ವಾಪಾಸ್ ಕಳಿಸಿದ್ದಾರೆ. ಅನಂತರ ಬಳಿಕ ಬುರ್ಖಾಧಾರಿ ಪಕ್ಕದ ಬೇಲಿಯತ್ತ ತೆರಳಿ ಬುರ್ಖಾ ಬದಲಿಸಿ ಯುವಕನ ವೇಷದಲ್ಲಿ ಮತ್ತೆ ಜಲಾಶಯದ ಪ್ರವೇಶ ದ್ವಾರದಲ್ಲಿ ಪತ್ತೆಯಾಗಿದ್ದಾನೆ.
ಇದರಿಂದ ಕೂಡಲೇ ಎಚ್ಚೆತ್ತ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಕೈಚೀಲದಲ್ಲಿ ಯುವತಿಯರು ಧರಿಸುವ ಬಟ್ಟೆಗಳು, ಲಿಪ್ ಸ್ಟಿಕ್, ನೈಲ್ ಪಾಲಿಶ್ ಇತರೆ ವಸ್ತುಗಳು ಪತ್ತೆಯಾಗಿವೆ. ವಶಕ್ಕೆ ಪಡೆದ ಯುವಕನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
ಬುರ್ಖಾಧಾರಿ ವ್ಯಕ್ತ ಕಿಶೋರ್ (22) ಎಂದು ವಿಚಾರಣೆಯಲ್ಲಿ ತಿಳಿಸಿದ್ದಾನೆ. ಹಾಸನದಲ್ಲಿ ಬೇಕರಿ ಅಂಗಡಿ ಹೊಂದಿರುವುದಾಗಿ, ದೈಹಿಕವಾಗಿ ತನ್ನಲ್ಲಿ ಮಹಿಳಾತನ ಪರಿವರ್ತನೆ ಆಗುತ್ತಿರುವ ಕಾರಣ ಯುವತಿಯರ ವೇಷ ಧರಿಸುತ್ತಿರುವುದಾಗಿ ಹೇಳಿಕೊಂಡಿದ್ದಾನೆ.
ಹೆತ್ತವರು ತನಗೆ ಮದುವೆ ಮಾಡಲು ವಧು ಹುಡುಕುತ್ತಿದ್ದಾರೆ. ಆದರೆ, ನಾನು ತೃತೀಯ ಲಿಂಗಿಯಾಗಿ ಪರಿವರ್ತನೆ ಹೊಂದುತ್ತಿರುವೆ. ನನಗೆ ಮದುವೆ ಬೇಡ ಎಂದರೂ ಒತ್ತಡ ಹೇರುತ್ತಿರುವ ಕಾರಣ ಮನೆ ತೊರೆದು ಬಂದಿರುವುದಾಗಿ ಹೇಳಿಕೊಂಡಿದ್ದಾನೆ.
ಆದಾಗ್ಯೂ, ಯುವಕ ಹಾಸನದಿಂದ ಆಲಮಟ್ಟಿಗೆ ಬಂದದ್ದು ಏಕೆ, ನಸುಕಿನಲ್ಲೇ ಜಲಾಶಯ ಪ್ರವೇಶಕ್ಕೆ ಯತ್ನಿಸಿದ್ದು ಏಕೆ ಎಂದೆಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.