ತಮಿಳುನಾಡಿ(Taminunadu)ನಲ್ಲಿ ಸರಣಿ ವಿದ್ಯಾರ್ಥಿನಿಯರ ಆತ್ಮಹತ್ಯೆ(Serial Sucied) ಪ್ರಕರಣಗಳು ವರದಿಯಾಗುತ್ತಿವೆ. ಇದೀಗ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಆ ಮೂಲಕ ತಮಿಳುನಾಡಿನಲ್ಲಿ(Taminunadu) ಕೇವಲ 2 ವಾರಗಳಲ್ಲಿ 3 ಜನ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ(Serial Sucied).
ಕಳೆದ ವಾರವಷ್ಟೇ ವಸತಿಯುಕ್ತ ಕಾಲೇಜಿನನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಳು. ಅನಂತರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದ ಪೋಷಕರು ಉದ್ರಿಕ್ತಗೊಂಡು ಶಾಲೆಯ ವಾಹನಗಳಿಗೆ ಬೆಂಕಿ ಹಚ್ಚಿ ಉಗ್ರ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ : ಟ್ರೋಲ್ ಪೇಜ್ಗಳ ವಿರುದ್ಧ ಸಿಡಿದೆದ್ದ ವಿನಯ್ ಗುರೂಜಿ – Pratikshana News
ಆ ಬೆನ್ನಲ್ಲೇ, ಮತ್ತೊಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಇದೀಗ, ಮತ್ತೊಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಮನೆಯಲ್ಲಿ ತಾಯಿ ಬೈಯ್ದಿದ್ದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಬೇಜಾರಿನಲ್ಲಿದ್ದರು. ಆ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಹದಿಹರೆಯದ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಯರು ಆತ್ಮಹತ್ಯೆ ಆಲೋಚನೆಯಿಂದ ದೂರವಿರುವಂತೆ ಮನವಿ ಮಾಡಿಕೊಂಡಿದ್ದಾರೆ.