ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ(Madeva). ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ(Sonal Monthera) ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.
ವಿನೋದ್ ಹಾಗೂ ಸೋನಲ್ (Sonal Monthera) ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ ಸಿನಿಮಾ ಸಾರಥಿ ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಾದೇವ(Madeva) ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮವರ್ಗದ ಹುಡುಗಿಯಾಗಿ ಬಣ್ಣ ಹಚ್ಚಲಿದ್ದಾರೆ.
80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ಈ ಚಿತ್ರದಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ : ಕಬಡ್ಡಿ ಆಡುತ್ತಲೇ ಪ್ರಾಣಬಿಟ್ಟ ಯುವಕ – ವಿಡಿಯೋ ನೋಡಿ – Pratikshana News
ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃಷ್ಣ ತೋಟ ಕ್ಯಾಮೆರಾ ಕೈಚಳಕ, ಪ್ರದ್ಯೋಥನ್ ಮ್ಯೂಸಿಕ್ ಪುಳಕ ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮಂತ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ.
ಮಾದೇವ ಸಿನಿಮಾದ ಜೊತೆಯಲ್ಲಿ ವಿನೋದ್ ಪ್ರಭಾಕರ್ ಲಂಕಾಸುರ ಸಿನಿಮಾದಲ್ಲಿಯೂ ಬ್ಯುಸಿಯಾಗಿದ್ದಾರೆ. ತಮ್ಮದೇ ಟೈಗರ್ ಟಾಕೀಸ್ ನಡಿ ವಿನೋದ್ ಪತ್ನಿ ನಿಶಾ ನಿರ್ಮಾಣ ಮಾಡ್ತಿರುವ ಈ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡ್ತಿದೆ. ಈ ಚಿತ್ರದಲ್ಲಿ ಮರಿ ಟೈಗರ್ ಹೊಸ ಅವತಾರದಲ್ಲಿ ಅಬ್ಬರಿಸಿದ್ದಾರೆ.