ತರಗತಿಯಲ್ಲಿ ವಿದ್ಯಾರ್ಥಿಯ ಜೊತೆ ಮಸಾಜ್ ಮಾಡಿಸಿಕೊಂಡಿದ್ದ ಶಿಕ್ಷಕಿಯನ್ನು ಅಮಾನತು ಮಾಡಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ತರ್ತಿ ಕೊಠಡಿಯಲ್ಲಿ ಶಿಕ್ಷಕಿಯೊಬ್ಬರು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬನ ಜೊತೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಈ ಬೆನ್ನಲ್ಲೇ, ನೆಟ್ಟಿಗರು ಹಾಗೂ ಹಲವು ಜನ ಪೋಷಕರು ಶಿಕ್ಷಕಿಯ ಈ ವರ್ತನೆಗೆ ಕಿಡಿಕಾರಿದ್ದರು.
ಶಿಕ್ಷಕಿಯ ವರ್ತನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಉತ್ತರ ಪ್ರದೇಶ ಶಿಕ್ಷಣ ಇಲಾಖೆ ತಿಳಿಸಿದೆ.
School teacher is sitting comfortably and pressing her hands with the children of the class in Uttarpradesh Hardoi
Action initiated by concern authorities
Bringing shame to such noble profession 🙆#Hardoi pic.twitter.com/yRRSUCs6lH— Nandini Idnani 🚩🇮🇳 (@nandiniidnani69) July 28, 2022
ಹರ್ದೋಯಿಯ ಪೋಖಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿಯನ್ನು ಊರ್ಮಿಳಾ ಸಿಂಗ್ ಎಂದು ಗುರುತಿಸಲಾಗಿದೆ. ಶಿಕ್ಷಕಿ ಕುರ್ಚಿ ಮೇಲೆ ಕುಳಿತುಕೊಂಡು ವಿಶ್ರಾಂತಿ ಪಡೆಯುತ್ತಿದ್ದರೆ, ವಿದ್ಯಾರ್ಥಿಯೊಬ್ಬ ಪಕ್ಕದಲ್ಲಿ ನಿಂತುಕೊಂಡು ಮಸಾಜ್ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿ, ವೈರಲ್ ಆಗಿತ್ತು.