ADVERTISEMENT
ಮಧ್ಯಪ್ರದೇಶದಲ್ಲಿ ಖಾಸಗೀ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅವಘಡ ನಡೆದಿದ್ದು, 10 ಜನ ಸಜೀವ ದಹನವಾಗಿದ್ದಾರೆ.
ಮಧ್ಯಪ್ರದೇಶದ ಜುಬ್ಬಲ್ಪುರ ಜಿಲ್ಲೆಯ ಗೋಹಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಲ್ ಭಾಟಾದಲ್ಲಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ 10 ಜನ ಸಾವನ್ನಪ್ಪಿದ್ದು, 3 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ, 10 ಜನ ಜನ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಅಲ್ಲಯ್ಯ ರಾಜಾ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ ಆಸ್ಪತ್ರೆಯಿಂದ ಸುರಕ್ಷಿತ ಪ್ರದೇಶಕ್ಕೆ ತೆರಳಲು ಒಂದೇ ಮಾರ್ಗವಿದ್ದ ಕಾರಣ ಹೆಚ್ಚಿನ ಜನರು ಒಳಗೆ ಸಿಲುಕಿಕೊಂಡಿದ್ದರು. ಆರಂಭದಲ್ಲಿ ಅಗ್ನಿಶಾಮಕ ದಳದ ವಾಹನಗಳಿಂದಲೂ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಬಳಿಕ ವಿದ್ಯುತ್ ಇಲಾಖೆಯ ನೌಕರರು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಬಳಿಕ 1 ಗಂಟೆಯ ಸತತ ಪ್ರಯತ್ನದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.
ADVERTISEMENT