ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ 9 ಗಂಟೆಯವರೆಗಿನ ನಿರ್ಬಂಧವನ್ನು ಸಡಿಲಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ರಾಜೇಂದ್ರ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳ ನಿಯಂತ್ರಣಕ್ಕಾಗಿ ರಾತ್ರಿ ನಿರ್ಬಂಧ ವಿಧಿಸಲಾಗಿತ್ತು.
ಇದೀಗ, ಅಗಸ್ಟ್ 5ರ ರಾತ್ರಿ 9ರಿಂದ ಬೆಳಿಗ್ಗೆ 6 ಗಂಟೆಯವರೆಗೆ 3 ದಿನಗಳ ಕಾಲ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಅಗಸ್ಟ್ 5ರ ಮೊದಲು ಸಾಯಂಕಾಲ 6ರಿಂದ ಬೆಳಿಗ್ಗೆ 6ರ ವರೆಗೆ ನಿರ್ಬಂಧ ವಿಧಿಸಿ ಈ ಹಿಂದೆ ಆದೇಶ ಹೊರಡಿಸಲಾಗಿತ್ತು.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅಂಗಡಿ ಮುಗ್ಗಟ್ಟುಗಳು ರಾತ್ರಿ 9 ರಿಂದ ಬೆಳಿಗ್ಗೆ 6 ರ ವರೆಗೆ ಮುಚ್ಚಲಿವೆ. ಅಗಸ್ಟ್ 5ರಿಂದ ಮದ್ಯದಂಗಡಿಗಳನ್ನು ಸಾಯಂಕಾಲ 6ರ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಇನ್ನುಳಿದಂತೆ 144 ಸೆಕ್ಷನ್ ಹಿಂದಿನಂತೆಯೇ ಜಾರಿಯಲ್ಲಿರಲಿದೆ.