ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನ ಸರ್ಕಾರದ ಆಸ್ತಿ ಎಂದು ಆದೇಶ ಹೊರಡಿಸಲಾಗಿದೆ. ಈ ಆದೇಶ ಹೊರಡಿಸಿದ ಬೆನ್ನಲ್ಲೇ, ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಆದೇಶ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಗಾಗಿ 2 KSRP ತುಕಡಿ, 1 CAR ತುಕಡಿ ನಿಯೋಜನೆ ಮಾಡಲಾಗಿದೆ. ಏರಿಯಾದಲ್ಲಿ ಪೊಲೀಸರು ಗಸ್ತು ತಿರುಗುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.
ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಹೀಮದೂ ಸಂಗಟನೆಗಳು ಬಿಬಿಎಂಪಿಗೆ ಕೆಲ ತಿಂಗಳುಗಳ ಹಿಂದೆ ಮನವಿ ಸಲ್ಲಿಸಿದ್ದವು. ಆ ಬೆನ್ನಲ್ಲೇ, ಈದ್ಗಾ ಮೈದಾನಸ ವಾರಸುದಾರತ್ವದ ಬಗ್ಗೆ ಚರ್ಚೆ ಹುಟ್ಟಿಕೊಂಡಿತ್ತು.
ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದ ವಾರಸುದಾರತ್ವದ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ವಕ್ಪ್ ಬೋರ್ಡ್ ಮತ್ತು ಬಿಬಿಎಂಪಿ ಮಧ್ಯೆ ಈ ಜಾಗದ ಆಸ್ತಿಯ ಬಗ್ಗೆ ತಿಕ್ಕಾಟ ನಡೆದಿತ್ತು. ಇದೀಗ, ಈದ್ಗಾ ಮೈದಾನ ಸರ್ಕಾರ ಆಸ್ತಿ ಎಂದು ಘೋಷಣೆಯಾಗಿದೆ.