ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ( B S Yediyurappa) ಮತ್ತು ಬಿ ಎಲ್ ಸಂತೋಷ್ (B L Santosh) ನಡುವಿನ ಮುನಿಸು ಮರೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.
ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ವೈ ಅವರು ಬಿಜೆಪಿ (BJP) ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಭೇಟಿ ಆಗಿದ್ದಾರೆ.
ಇತ್ತೀಚೆಗೆ ಪುನರ್ ರಚನೆ ಆದ ಬಿಜೆಪಿ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಗೆ ಯಡಿಯೂರಪ್ಪ ಮತ್ತು ಸಂತೋಷ್ ಇಬ್ಬರೂ ನೇಮಕ ಆಗಿದ್ದರು.
ನವದೆಹಲಿಯಲ್ಲಿ ಇಂದು ನಮ್ಮ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthoshರವರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು