ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರು ಅವರವರ ಊರಿಗೆ ತೆರಳಲು ಸಾರಿಗೆ ಇಲಾಖೆ (KSRTC) ಹೆಚ್ಚಿನ 500 ಬಸ್ಗಳ ವ್ಯವಸ್ಥೆ ಮಾಡುತ್ತದೆ ಎಂದು ಈ ಹಿಂದೆಯೇ ಹೇಳಿತ್ತು. ಇದೀಗ, KSRTC ಬಸ್ಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇ.10 ರ ರಿಯಾಯಿತಿ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತೆರಳಲು ಅನುಕೂಲವಾಗುವಂತೆ ಮುಂಗಡ ಆನ್ಲೈನ್ (online) ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಕಲ್ಲಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು.
ಇದನ್ನೂ ಓದಿ : KSRTC ಬಸ್ನಲ್ಲಿ ಹೋಗ್ತೀರಾ..? – ಈಗಲೇ ಈ ಸುದ್ದಿ ಓದಿ
5 ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ 10% ರಿಯಾಯಿತಿ ನೀಡಲಾಗುವುದು. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತೆರಳಲು ಅನುಕೂಲವಾಗುವಂತೆ ಮುಂಗಡ ಆನ್ಲೈನ್ (online) ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಕಲ್ಲಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು. 1/4
— B Sriramulu (Modi Ka Parivar) (@sriramulubjp) August 27, 2022
ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, 500 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ
ಆಗಸ್ಟ್ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : KSRTC ಬಸ್ ಟಿಕೆಟ್ ದರ ಗಣನೀಯ ಹೆಚ್ಚಳ – ಪ್ರಯಾಣಿಕರಿಗೆ ಆಘಾತ