ಪ್ರಸಿದ್ಧ ಆಗುಂಬೆ ಘಾಟ್ (Agumbe Ghat) ನಲ್ಲಿ ಮತ್ತೆ ಭೂಕುಸಿತವಾಗಿದೆ.
ಭೂಕುಸಿತ ಹಿನ್ನೆಲೆಯಲ್ಲಿ ಒಂದೇ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ.
ಲಘು ವಾಹನಗಳ ಓಡಾಟಕ್ಕೆ ಯಾವುದೇ ನಿರ್ಬಂಧ ಇಲ್ಲ.
ಭಾರಿ ವಾಹನಗಳ ಓಡಾಟವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.
ಆಗುಂಬೆ ಘಾಟ್ ನಲ್ಲಿ 11ನೇ ತಿರುವಿನಲ್ಲಿ ಭೂಕುಸಿತವಾಗಿದೆ.
ಬಸ್ಸುಗಳ ಓಡಾಟಕ್ಕೆ ಯಾವುದೇ ನಿರ್ಬಂಧ ಇಲ್ಲ.