ಪ್ರಥಮ ದರ್ಜೆ ಸಹಾಯಕರ (FDA) ಹುದ್ದೆ ಕೊಡಿಸಲು ಅವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಅಶ್ವಿನಿ ಅನಂತಪುರ (PSI Ashwini Anantapura) ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಕೆಪಿಎಸ್ಸಿಯ ಎಫ್ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಜಿಲ್ಲೆಯ ಸಂಗಮೇಶ ಝಳಕಿ ಎಂಬುವರ ಜೊತೆ ಆರೋಪಿ ಪಿಎಸ್ಐ ಮಾತನಾಡಿದ್ದೆನ್ನಲಾದ ಮೊಬೈಲ್ ಹಾಗೂ ವಾಟ್ಸ್ಆ್ಯಪ್ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್ ಸ್ಟೇಟ್ಮೆಂಟ್ ಕೂಡ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು. ಇದನ್ನೂ ಓದಿ : ರಾಯಚೂರಿನ ಎಫ್ಡಿಎ ಅಧಿಕಾರಿ ಆತ್ಮಹತ್ಯೆಗೆ ಶರಣು
ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ.
ಗುರುತರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪಿಎಸ್ಐ ಅಶ್ವಿನಿ ಅನಂತಪುರ (PSI Ashwini Anantapura)ರನ್ನು ಅಮಾನತು ಮಾಡಲಾಗಿದ್ದು, ನಗರ ಅಪರಾಧ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಹೇಳಿದ್ದಾರೆ. ಇದನ್ನೂ ಓದಿ : PSI ಅಕ್ರಮ ಪರೀಕ್ಷೆ ಕೇಸ್ : ಮೊದಲ ರ್ಯಾಂಕ್ ಪಡೆದಿದ್ದ ರಚನಾ ಅರೆಸ್ಟ್