ಹೈದ್ರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೇ ಸೆಪ್ಟಂಬರ್ 25 ರಂದು ಭಾರತ ಮತ್ತು ಆಸ್ಟ್ರೇಲಿಯಾ (IND vs AUS Tickets) ನಡುವೆ 3 ನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ಸಿಕಂದರಾಬಾದ್ನಲ್ಲಿ ಟಿಕೆಟ್ ಖರೀಸಿಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಜನರ ಗುಂಪು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ 20 ಜನ ಗಾಯಗೊಂಡಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಹೈದ್ರಾಬಾದ್ನಲ್ಲಿ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಗುರುವಾರದಿಂದ ಸಿಕಂದರಾಬಾದ್ನ ಜಿಮ್ಕಾನ ಗ್ರೌಂಡ್ನಲ್ಲಿ ಟಿಕೆಟ್ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಮಂಗಳವಾರದಿಂದಲೇ ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ಖರೀದಿಸಲು ಆಗಮಿಸುತ್ತಿದ್ದಾರೆ. ಆದರೆ, ಅಲ್ಲಿನ ಸಿಬ್ಬಂದಿಗಳು ಮರಳಿ ಕಳುಹಿಸಿದ್ದರು.
ಇಂದು ಗುರುವಾರ ಬೆಳ್ಳಂಬೆಳಿಗ್ಗೆ 6 ಗಂಟೆಯಿಂದಲೇ ಟಿಕೆಟ್ಗಾಗಿ (IND vs AUS Tickets) ಜನರು ಬಂದಿದ್ದಾರೆ. ಟಿಕೆಟ್ ವಿತರಣೆ 10 ಗಂಟೆಗೆ ಆರಂಭವಾಗಿತ್ತು. ಈ ವೇಳೆ ಟಿಕೆಟ್ಗಾಗಿ ಅಭಿಮಾನಿಗಳು ಮಗಿಬಿದ್ದಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಚಾರ್ಜ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಈ ಗಲಾಟೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ಗುಂಪುನ್ನು ಚದುರಿಸಿರುವ ಪೊಲೀಸರು, ಪರಿಸ್ಥಿತಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಅಂತರಾಷ್ಟ್ರೀಯ ಕ್ರಿಕೆಟ್ಗೆ ಕನ್ನಡಿಗ ರಾಬಿನ್ ಉತ್ತಪ್ಪ ನಿವೃತ್ತಿ