ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧವೇ? ಬೊಮ್ಮಾಯಿ ಅವರೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ ಬಿಜೆಪಿಯವರೇ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..!
ರಾಜ್ಯ ಬಿಜೆಪಿ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿಕೆ ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿಗಳು ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ?
ಇದನ್ನೂ ಓದಿ : ಬಿಜೆಪಿ ಭ್ರಷ್ಟಾಚಾರ: PAYCM ಪೋಸ್ಟರ್ ಸಂಬಂಧ ಮೂವರ ಬಂಧನ
ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ.
ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.
ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ @BJP4Karnataka? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ?
ಜನ ಬಂಡೆದಿದ್ದಾರೆ, ಎಚ್ಚರ..! 1/5#PayCM #40PercentSarkara— Siddaramaiah (@siddaramaiah) September 22, 2022
ರಾಜ್ಯ ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ.
ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಏನು ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಹಾಗೂ ಮುಖ್ಯಮನಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೇಟಿಎಂ ಮಾದರಿಯಲ್ಲಿ ಪೇಸಿಎಂ ಪೋಸ್ಟರ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟಂಡಿಸಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಬಗ್ಗೆ ಸಿಎಂ ಬೊಮ್ಮಾಯಿ ಕೋಪಗೊಂಡು ಪೋಸ್ಟರ್ ಅಂಟಿಸಿದವರ ಮೇಲೆ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಂಗಳವಾರ ರಾತ್ರಿ 3 ಜನ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು.
ಇದನ್ನೂ ಓದಿ : ನಾಳೆ Paycm Poster ಹಿಡಿದು ಪ್ರತಿಭಟನೆ : ಸಿದ್ದರಾಮಯ್ಯ ಘೋಷಣೆ