ಸಿಇಟಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಉತ್ತಮ ಅಂಕ ಗಳಿಸಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಚಿಕ್ಕಗೊಲ್ಲರಹಟ್ಟಿ ನಿವಾಸಿ ಎಸ್. ತೇಜಸ್ವಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ತೇಜಸ್ವಿನಿ ಕುಟುಂಬ 10 ವರ್ಷದ ಹಿಂದೆ ನೌಕರಿ ಹುಡುಕಿಕೊಂಡು ಹೊಸಪೇಟೆಯಿಂದ ಬೆಂಗಳೂರಿಗೆ ಬಂದು ನೆಲೆಸಿತ್ತು. ತಂದೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ, ತಾಯಿ ಗೃಹಿಣಿ.
ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ಸಿಇಟಿ ಫಲಿತಾಂಶ ಪ್ರಕಟವಾದ ನಂತರ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ಒಂಟಿಯಾಗಿದ್ದ ಆಕೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮನೆಗೆ ಹಿಂತಿರುಗಿದ ಆಕೆಯ ತಂದೆ ನೇಣು ಬಿಗಿದುಕೊಂಡಿರುವುದನ್ನು ಕಂಡು ಮಾದನಾಯಕನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಅಸಹಜ ಸಾವು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : Actress Deepa : ಯುವ ನಟಿ ದೀಪ ಆತ್ಮಹತ್ಯೆ