ಅಬಕಾರಿ ನೀತಿ ಹಗರಣಕ್ಕೆ (Delhi Excise policy scam) ಸಂಬಂಧಿಸಿ ಇಂಡೋಸ್ಪಿರಿಟ್ಸ್ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಸಿಬಿಐ ಪ್ರಕರಣ ದಾಖಲಿಸಿದೆ.
ಎಎಪಿಯ ಸಂವಹನ ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ವಿಜಯ್ ನಾಯರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ ಒಂದು ದಿನದ ನಂತರ, ಮದ್ಯವನ್ನು ವಿತರಿಸುವ ಇಂಡೋಸ್ಪಿರಿಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರು ಅವರ ಬಂಧನವಾಗಿದೆ.
ದೆಹಲಿಯ ಅಬಕಾರಿ ನೀತಿಯ (Delhi Excise policy scam) ಕುರಿತು ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಶಿಫಾರಸು ಮಾಡಿದ್ದರು. ಪಂಜಾಬ್ ವಿಧಾನಸಭೆಗೆ ಈ ವರ್ಷ ನಡೆದ ಚುನಾವಣೆಯ ಖರ್ಚಿಗೆ ಹೊಸ ಅಬಕಾರಿ ನೀತಿಯಿಂದ ದೊರೆತ ಹಣವನ್ನು ಎಎಪಿ ಬಳಸಿದೆ ಎಂದು ಆ ಪಕ್ಷದ ವಿರೋಧಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ : Delhi Excise Policy Case : ಬೆಂಗಳೂರು ಸೇರಿ ಹಲವೆಡೆ ಇಡಿ ದಾಳಿ