ಹೊಸದಿಲ್ಲಿ: ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಸೇರಿದಂತೆ ಆರು ಜನರ ಆರೋಪಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡುವಂತೆ ಆದೇಶಿಸಿದೆ. ತಮಿಳುನಾಡು ಸರ್ಕಾರ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.
ಇದೀಗ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದು, ಈ ಹಿಂದೆ ತಮಿಳುನಾಡು ಸರ್ಕಾರ ಕೂಡಾ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.
1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಯಲ್ಲದೆ ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಹಾಗೂ ರವಿಚಂದ್ರನ್ ಜೈಲು ಪಾಲಾಗಿದ್ದರು.
1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಇಂದು ಬಿಡುಗಡೆಗೊಳಿಸುವಂತೆ ಆದೇಶವನ್ನು ಸುಪ್ರೀಂ ಆದೇಶವನ್ನು ನೀಡಿದೆ.