ADVERTISEMENT
ಗುಜರಾತ್ನಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಮೂವರು ವೀಕ್ಷಕರನ್ನು ನೇಮಿಸಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡಾ ಆ ಮೂವರು ವೀಕ್ಷಕರಲ್ಲಿ ಒಬ್ಬರು.
ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರನ್ನೂ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಗುಜರಾತ್ಗೆ ತೆರಳಲಿರುವ ಮೂವರು ವೀಕ್ಷಕರು ಗುಜರಾತ್ ಬಿಜೆಪಿ ಶಾಸಕರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಶಾಸಕಾಂಗ ಪಕ್ಷದ ಹೊಸ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನೋಡಿಕೊಳ್ಳಲಿದ್ದಾರೆ.
ಮೂಲಗಳ ಪ್ರಕಾರ ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನೇ ಮತ್ತೆ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಘೋಷಿಸುವ ನಿರೀಕ್ಷೆ ಇದೆ.
182 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರೀ 156 ಸೀಟುಗಳನ್ನು ಗೆದ್ದುಕೊಂಡಿತ್ತು.
ADVERTISEMENT